ಕೊಪ್ಪಳ : ಜಿಲ್ಲಾಡಳಿತ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ಮೂರು ಲಕ್ಷ ರೂಪಾಯಿ ಲಂಚ ಪಡೆಯುವಾಗ ಅಧಿಕಾರಿಯೊಬ್ಬರು ಬುಧವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೊಪ್ಪಳ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಲ್ಲಿ ಟೌನ್ ಪ್ಲಾನರ್ ಹುದ್ದೆಯ ರಮೇಶ ಬಸವಗೌಡ ಎಂಬ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕುಕನೂರಿನ ರವಿಚಂದ್ರ ಎಂಬುವವರಿಗೆ ಲೇಔಟ್ ಪರವಾನಗಿ ನೀಡಲು ಎಂಟು ಲಕ್ಷ ರೂಪಾಯಿ ಕೇಳಿದ್ದ ರಮೇಶ ಬಸವಗೌಡ ಮಂಗಳವಾರ ರಾತ್ರಿ ಕಚೇರಿಯಲ್ಲಿ ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಸಿಕ್ಕುಬಿದ್ದಿದ್ದಾರೆ.
ರಾಯಚೂರು ಲೋಕಾಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ
ಕೊಪ್ಪಳ ಲೋಕಾಯುಕ್ತ ಪಿಐ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು ಎಂದು ತಿಳಿದು ಬಂದಿದೆ.