ಕೊಪ್ಪಳ : ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಯುವಕನಿಗೆ ಚಾಕುನಿಂದ ಇರಿದ ಘಟನೆ ಸೋಮವಾರ ಮಧ್ಯರಾತ್ರಿ ಗಂಗಾವತಿಯಲ್ಲಿ ನಡೆದಿದೆ.
ಗುಂಡಮ್ಮ ಕ್ಯಾಂಪ್ ನ ಗಣೇಶ ವಿಸರ್ಜನೆ ಮೆರವಣಿಗೆ ಖಾಸಗಿ ಆಸ್ಪತ್ರೆ ಹತ್ತಿರ ಬಂದಾಗ ಯುವಕರ ಗುಂಪಿನ ನಡುವೆ ಜಗಳ ಆರಂಭವಾಗಿದೆ.
ಮೆರವಣಿಗೆಯಲ್ಲಿ ಡಿಜೆ ಸಂಗೀತಕ್ಕೆ ಡ್ಯಾನ್ಸ್ ಮಾಡುವ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿ ಶಿವಕುಮಾರ ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.
ಗಾಯಾಳು ಶಿವಕುಮಾರನನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ, ಮಂಜು , ಸಾಗರ್ ಎಂಬ ಯುವಕರು ಗಾಯಗೊಂಡಿದ್ದು ಅವರನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಹಳೆ ವೈಷಮ್ಯ ಕಾರಣ ಎಂದು ತಿಳಿದು ಬಂದಿದೆ. ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.