ಕೊಪ್ಪಳ : ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೊಪ್ಪಳದ ಬಸವೇಶ್ವರ ಸರ್ಕಲ್ ನಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ಮುಡಾ ಹಗರಣದಲ್ಲಿ ನಾನು ತಪ್ಪು ಮಾಡಿಲ್ಲ ನನ್ನ ರಾಜಕೀಯ ಇತಿಹಾಸದಲ್ಲಿ ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯನವರ ಸಾಚಾತನ ಏನು ಎಂಬುದು ಈಗ ರಾಜ್ಯಕ್ಕೆ ಗೊತ್ತಾಗಿದೆ. ಸಿದ್ದರಾಮಯ್ಯ ಬಣ್ಣ ಬಯಲಾಗಿದೆ.
ಇಷ್ಟಾದರೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ ಎನ್ನುವ ನೀವು (ಸಿದ್ದರಾಮಯ್ಯ) ಯಾವ ನೈತಿಕತೆಯಿಂದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೀರಿ ? ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಬಿಜೆಪಿ ಜಿಲ್ಲಾಧ್ಯಕ್ಷರು ನವೀನಕುಮಾರ ಗುಳಗಣ್ಣವರ ಮಾತನಾಡಿದರು.
ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷರು ಗಣೇಶ್ ಹೊರತಟ್ನಾಳ, ವಾಣಿಶ್ರೀ ಮಠದ, ಭೂಸನೂರ ಮಠ ವಕೀಲರು , ಆರ್ ಬಿ ಪಾನಘಂಟಿ ವಕೀಲರು, ಸುನಿಲ್ ಹೆಸರೂರು, ನಗರ ಘಟಕ ಅಧ್ಯಕ್ಷರು ರಮೇಶ್ ಕವಲೂರು, ನಗರಸಭೆ ಸದಸ್ಯ ಸೋಮಣ್ಣ ಹಳ್ಳಿ, ರಮೇಶ ತುಪ್ಪದ , ಶಿವಕುಮಾರ ಕುಕನೂರು, ಅಮರೇಶ ಮುರಲಿ, ಕರಿಯಪ್ಪ ಮೇಟಿ, ಪ್ರಭುರಾಜ ಹಾಗೂ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.