ಕೊಪ್ಪಳ : ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸಿ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರದ ಪ್ರವೀಣ ಮಲ್ಲಿಕಾರ್ಜುನ ಹೊಸಮನಿ ಎಂಬ 27 ವರ್ಷದ ಯುವಕ ಉತ್ತರ ಪ್ರದೇಶದ ಗೋರಖ್‌ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾನೆ.
ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕ ಪ್ರವೀಣ ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಭಾಗವಹಿಸಿ ಅಲ್ಲಿಂದ ಅಯೋಧ್ಯೆಗೆ ಹೋಗುವಾಗ ಮಾರ್ಗ ಮಧ್ಯೆ ಗೋರಖ್‌ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಂತಿ ತಗುಲಿ ತೀವ್ರ ಗಾಯಗೊಂಡಿದ್ದಾನೆ. ರೈಲ್ವೆ ಪೊಲೀಸರು ತಕ್ಷಣ ಗೋರಖ್ ಪುರ ಬಿಆರ್ ಡಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ.
ಕಾರಟಗಿ ತಹಶೀಲ್ದಾರ ಕುಮಾರಸ್ವಾಮಿ ಮೃತ ಯುವಕನ ಮೆನೆಗೆ ತೆರಳಿ ಪಾಲಕರಿಗೆ ಮಾಹಿತಿ ನೀಡಿದ್ದು, ಯುವಕನ ಮೃತದೇಹ ಸ್ವಗ್ರಾಮಕ್ಕೆ ತರಲು ಪ್ರಯತ್ನಿಸಿದ್ದಾರೆ.