Advt. 
 Views   162

ಮದ್ಯಪಾನ ಬೆಂಬಲಿಸಿದ ಸಚಿವರು : ಸರಕಾರಕ್ಕೆ ಆದಾಯ ಮುಖ್ಯ ?

Apr 03, 2026, 07:48 AM IST
ಮದ್ಯಪಾನ ಬೆಂಬಲಿಸಿದ ಸಚಿವರು : ಸರಕಾರಕ್ಕೆ ಆದಾಯ ಮುಖ್ಯ ?

ಕೊಪ್ಪಳ : ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯ ಸರಕಾರ ತಿಪ್ಪರಲಾಗ ಹಾಕುತ್ತಿದೆಯಾ ? ಇಂಥ ಅನುಮಾನದ ನಡುವೆ ರಾಜ್ಯದಲ್ಲಿ ಮದ್ಯಪಾನ ನಿಷೇಧ ಅಪ್ರಪಸ್ತುತ ಎಂದು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲರು ಹೇಳಿದ್ದು ಈ ಮಾತನ್ನು AIDYO ಖಂಡಿಸಿದೆ.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಪ್ರಕಟಣೆ ನೀಡಿ - ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ 'ಸಂಯಮ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಹೆಚ್. ಕೆ. ಪಾಟೀಲರು - ಮದ್ಯ ಮಾರಾಟದಿಂದ ರಾಜ್ಯಕ್ಕೆ ವರ್ಷಕ್ಕೆ 40 ಸಾವಿರ ಕೋಟಿ ಆದಾಯವಿದೆ.

ಮದ್ಯಪಾನಕ್ಕಿಂತಲೂ ಗಾಂಜಾ, ಅಫೀಮು, ಡ್ರಗ್ ಸೇವನೆಯಿಂದ ತರುಣರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿದ್ದಾರೆ. ಮದ್ಯಪಾನ ಮಾಡುತ್ತ 60-65 ವರ್ಷದವರೆಗೂ ಬದುಕಬಹುದು ಎಂದು ಸಚಿವರು ಮದ್ಯಪಾನ ಪರ ವಹಿಸಿದ್ದು ಯುವಜನತೆಗೆ ತಪ್ಪು ಸಂದೇಶ ನೀಡುತ್ತದೆ.

ಕೃಷಿ - ಕೂಲಿ ಕಾರ್ಮಿಕರ ಮದ್ಯದ ವ್ಯಸನದಿಂದ ಕುಟುಂಬಗಳು ಬೀದಿಗೆ ಬರುತ್ತಿವೆ. ರಾಜ್ಯ ಸರ್ಕಾರ ಆದಾಯಕ್ಕಾಗಿ ಜನರ ಜೀವನ ಪಣಕ್ಕಿಡುವುದು ನಾಚಿಕೆಗೇಡಿನ ಸಂಗತಿ. ನಿಜವಾದ ಅಭಿವೃದ್ಧಿ ಎಂದರೆ ಜನರ ಆರೋಗ್ಯ, ಶಿಕ್ಷಣ ಮತ್ತು ಭವಿಷ್ಯ ಕಾಪಾಡುವುದೇ ಹೊರತು ವ್ಯಸನಗಳನ್ನು ಪ್ರೋತ್ಸಾಹಿಸುವುದಲ್ಲ. ಸಚಿವರು ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆದು ಮದಪಾನ ನಿಷೇಧ ಮಾಡಬೇಕು ಎಂದು ಶರಣು ಪಾಟೀಲ್ ಆಗ್ರಹಿಸಿದ್ದಾರೆ.‌



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Jul 10 2026 3:56PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜೆಡಿಎಸ್ ಬರ ಅಧ್ಯಯನ ತಂಡಕ್ಕೆ CVC
Jul 10 2026 8:59AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಗ್ರಾಮಾಯಣ ಸಂಭ್ರಮ : ಅಭಿಮಾನಿಗಳೊಂದಿಗೆ ವಿನಯರಾಜಕುಮಾರ್
Jul 9 2026 4:42PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಚುನಾವಣೆ
Jul 8 2026 7:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೂರಾರು ವಿದ್ಯಾರ್ಥಿಗಳ ಶಾಲೆಗೆ ಸಾಮೂಹಿಕ ಗೈರು
Jul 6 2026 8:19PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪ್ರಸ್ರಾವನೆ ಲೋಪ : 8ನೇ ತರಗತಿಗಾಗಿ ವಿದ್ಯಾರ್ಥಿಗಳು ಪರದಾಟ
Jul 6 2026 5:07PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಲೆಯಾದಾತನ ಅಣ್ಣ - ಅಳಿಯ ಅರೆಸ್ಟ್
Jul 6 2026 1:55PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಲಾರಿಗೆ ಕಾರು ಡಿಕ್ಕಿ : ಓರ್ವ ಸಾವು ಮೂವರು ಗಾಯ
Jul 5 2026 11:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮಂತ್ರಿಗಿರಿಗಾಗಿ ಹೋರಾಟ ಜನರ ಸಮಸ್ಯೆಗೆ ಮೌನ : ಕ್ಯಾವಟರ್
Jul 4 2026 3:48PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಸಾಲ : ಒಂದೆ ಕುಟುಂಬದ ಮೂವರು ನೇಣಿಗೆ ಶರಣು
Jul 3 2026 12:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಅಕ್ರಮ ಮರಳು : ಲೋಕಾಯುಕ್ತ ದಾಳಿ 8 ಜನರ ವಿರುದ್ದ ಕೇಸ್




Copyright © 2026 Agni Divya. All Rights Reserved.
Designed & Developed by We Make Digitize