ಕೊಪ್ಪಳ : ರಾಜ್ಯ ಸರಕಾರ ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತಗೊಳಿಸಿದ್ದನ್ನು ಖಂಡಿಸಿ SUCI (ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ ಜಿಲ್ಲಾಡಳಿತ ಭವನ ಮುಂದೆ ಪ್ರತಿಭಟಿಸಿ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ SUCI ಪಕ್ಷದ ಜಿಲ್ಲಾ ಮುಖಂಡ ಶರಣು ಗಡ್ಡಿ - ವೃದ್ಧರು, ವಿಧವೆಯರು, ವಿಕಲಚೇತನರು ಸೇರಿದಂತೆ ದುರ್ಬಲ ಜನರ ಬದುಕಿಗೆ ಆಸರೆಯಾಗಿದ್ದ ಪಿಂಚಣಿ ಕೆಲವು ತಿಂಗಳಿನಿಂದ ಸ್ಥಗಿತಗೊಳಿಸಿದ್ದು ಖಂಡನೀಯ.
ಪರಿಶೀಲನೆ ಮತ್ತು ದಾಖಲೆಗಳ ನೆಪದಲ್ಲಿ ಅರ್ಹ ಫಲಾನುಭವಿಗಳನ್ನು ಕಚೇರಿಗಳಿಗೆ ಅಲೆದಾಡಿಸುವ ಬದಲು, ತಕ್ಷಣ ಪರಿಹರಿಸಿ ಪಿಂಚಣಿಯನ್ನು ಮರುಜಾರಿಗೊಳಿಸಬೇಕು.
ಬೆಲೆ ಏರಿಕೆಗೆ ತಕ್ಕಂತೆ ಸಾಮಾಜಿಕ ಭದ್ರತಾ ಪಿಂಚಣಿಗಳ ಮೊತ್ತ ಹೆಚ್ಚಿಸಬೇಕು.
ಕರ್ನಾಟಕ ಸರ್ಕಾರ ಪಿಂಚಣಿ ಯೋಜನೆಗಳ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿ ₹ 32 ಸಾವಿರದಿಂದ 1.20 ಲಕ್ಷಕ್ಕೆ ಹೆಚ್ಚಿಸಿದ್ದು ಅರ್ಹರಿಗೆ ಅನ್ಯಾಯವಾಗದಂತೆ, ಪಿಂಚಣಿ ಪರಿಶೀಲನೆ ಸರಳಗೊಳಿಸಿ ಎಂದು ಗಡ್ಡಿ ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಮಂಗಳೇಶ ರಾತೋಡ್, ಹನುಮಂತ ಕಟಿಗಿ, ಪ್ರದೀಪ್, ದ್ಯಾಮಣ್ಣ ಡೊಳ್ಳಿನ, ಮದುಕಪ್ಪ, ಶ್ರೀಕಾಂತ್, ನಾಗಪ್ಪ, ಸತ್ಯಮ್ಮ, ಕರಿಯಪ್ಪ, ಸಂಜೀವಪ್ಪ, ವೆಂಕಟೇಶ, ಪಾತವ್ವ, ಕೆಂಚಮ್ಮ, ಗಂಗವ್ವ ಭಾಗವಹಿಸಿದ್ದರು.