ಕೊಪ್ಪಳ : ಕರ್ನಾಟಕ ರಾಜ್ಯ ಸರ್ಕಾರ scsp ಹಾಗೂ tsp ಯೋಜನೆಯ ಸಾವಿರಾರು ಕೋಟಿ ಹಣ ದುರ್ಬಳಕೆ ಮಾಡಿ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ ಎಂದು ಖಂಡಿಸಿ ಬಿಜೆಪಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿತು.
ಬಸವೇಶ್ವರ ವೃತ್ತದಿಂದ ಆರಂಭವಾದ ಪ್ರತಿಭಟನಾ ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದು ಬಂದರು.
ಈ ಸಂದರ್ಭದಲ್ಲಿ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿ ಮುಖಂಡರು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಸಾವಿರಾರು ಕೋಟಿ ಹಣವನ್ನು ಸರ್ಕಾರ ಅಕ್ರಮವಾಗಿ ಕಾನೂನು ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ. ಇದು ದಲಿತರ ಉದ್ಧಾರಕ್ಕಾಗಿ ಇಟ್ಟಂಥ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿ ದಲಿತರಿಗೆ ವಂಚನೆ ಎಸುಗುತ್ತಿದೆ ಇಂಥ ದಲಿತ ವಿರೋಧಿ ಸರಕಾರಕ್ಕೆ ಬರುವ ಜಿ. ಪಂ. ತಾ.ಪಂ ಹಾಗೂ 2028 ರ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕರು ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್, ಶಾಸಕರಾದ ಜನಾರ್ಧನ್ ರೆಡ್ಡಿ , ಎಂಎಲ್ಸಿ ಹೇಮಲತಾ ನಾಯಕ್ , ಮಾಜಿ ಸಚಿವರಾದ ಹಾಲಪ್ಪ ಆಚಾರ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ , ನವೀನಕುಮಾರ ಗುಳಗಣ್ಣವರ , ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಬಸವರಾಜ ದಡೇಸೂಗುರು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಹೊರತಟ್ನಾಳ, ಎಸ್ಟಿ ಮೋರ್ಚಾದ ವಿಜಯ ತಾಳಕೇರಿ, ಈ ಜನಾಂದೋಲನದ ಸಂಯೋಜಕರಾದ ವೈ. ಸಂಪಂಗಿ, ಶರಣು ತಳ್ಳಿಕೇರಿ ಸೇರಿದಂತೆ ಮುಖಂಡರು ವಿವಿಧ ಮೋರ್ಚಾಗಳ ಮುಖಂಡರು ಭಾಗವಹಿಸಿದ್ದರು.