ಕೊಪ್ಪಳ ಹತ್ತಿರ ಉಕ್ಕಿನ ಕಾರ್ಖಾನೆಯ ಕಾಮಗಾರಿಗಳನ್ನು ಕೂಡಲೇ ನಿಲ್ಲಿಸಬೇಕು ಮತ್ತು ಜನರ ಅಭಿಪ್ರಾಯ ಬಗ್ಗೆ ಸಮಗ್ರವಾಗಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ ಜಿಲ್ಲಾಧಿಕಾರಿಗೆ ಫೋನ್ ಮೂಲಕ ಸೂಚನೆ ನೀಡಿದ್ದಾರೆ.
ಇಂದು (ಮಂಗಳವಾರ) ಅವರನ್ನು ಭೇಟಿಯಾದ ಕೊಪ್ಪಳ ಜಿಲ್ಲೆಯ ಸರ್ವ ಪಕ್ಷಗಳ ನಿಯೋಗ ಭೇಟಿಯಾಗಿ ಕೊಪ್ಪಳ ಹತ್ತಿರ ಉಕ್ಕಿನ ಕಾರ್ಖಾನೆ ಆರಂಭದಿಂದ ಆಗುವ ಎಲ್ಲ ಅಪಾಯ ಮತ್ತು ತೊಂದರೆಗಳ ಬಗ್ಗೆ ಸಂಪೂರ್ಣ ವಿವರಿಸಿದಾಗ ಮುಖ್ಯಮಂತ್ರಿಗಳು ಕೂಡಲೇ ಜಿಲ್ಲಾಧಿಕಾರಿಗೆ ಕರೆ ಮಾಡಿ ಕಾರ್ಖಾನೆ ತಯಾರಿ ಕೆಲಸ ನಿಲ್ಲಿಸಲು ಕ್ರಮ ವಹಿಸುವಂತೆ ಸೂಚಿಸಿದ್ದಾರೆ.
ಕೊಪ್ಪಳ ಜಿಪ್ಪಾಧಿಕಾರಿ ಮೂಲಕ ಸಮಗ್ರ ವರದಿ ಪಡೆಯುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ಸಿಎಂ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕೂಡ ಸರ್ವ ಪಕ್ಷದ ನಿಯೋಗದ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ನೇತೃತ್ವದ ನಿಯೋಗದಲ್ಲಿ ಕೊಪ ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ಎಂಎಲ್ ಸಿ ಹೇಮಲತಾ ನಾಯಕ, ಜೆಡಿಎಸ್ ಮುಖಂಡರಾದ ಸಿ.ವಿ.ಚಂದ್ರಶೇಖರ , ವೀರೇಶ ಮಹಾಂತಯ್ಯನಮಠ, ಬಿಜೆಪಿ ಮುಖಂಡರಾದ ಡಾ. ಬಸವರಾಜ ಕ್ಯಾವಟರ್ ಸೇರಿದಂತೆ ಜಿಲ್ಲೆಯ 20 ಕ್ಕೂ ಹೆಚ್ಚು ಹಾಲಿ ಮಾಜಿ ಜನಪ್ರತಿನಿಧಿಗಳು ನಿಯೋಗದಲ್ಲಿದ್ದರು.