Advt. 
 Views   255

ಲಾರಿಗೆ ಕಾರು ಡಿಕ್ಕಿ : ಓರ್ವ ಸಾವು ಮೂವರು ಗಾಯ

Jul 06, 2026, 01:55 PM IST
ಲಾರಿಗೆ ಕಾರು ಡಿಕ್ಕಿ : ಓರ್ವ ಸಾವು ಮೂವರು ಗಾಯ

ಕೊಪ್ಪಳ : ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಲಿಂಗಾಪುರ ಸಮೀಪ ಐಆರ್‌ಬಿ ಮುಂದೆ ಕಾರೊಂದು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಜರುಗಿದೆ.

ತಮಿಳುನಾಡಿನ ಅಂಬೂರಿನಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ನಿಜಾಮುದ್ದೀನ್ (40) ಸ್ಥಳದಲ್ಲೇ ಮೃತಪಟ್ಟಿದ್ದು, ಇಮ್ರಾಜ್, ನಜೀರ್ ಅಹ್ಮದ್, ಹೊಹೆಲ್ ಅಹ್ಮದ್ ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಬೆಂಗಳೂರು ಮೂಲದವರು ಎಂದು ಹೇಳಲಾಗುತ್ತಿದೆ.

ಗಾಯಾಳುಗಳಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿದ್ದು ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Aug 16 2026 7:55AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹಾಳಾದ ರಸ್ತೆ : ಸಚಿವರು ಶಾಸಕ ಸಂಸದರಿಗೆ ಪ್ರತಿಭಟನೆಯ ಬಿಸಿ
Aug 13 2026 7:53PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ 350 ಅಡಿ ತ್ರಿವರ್ಣ ಧ್ವಜದ ಮೆರವಣಿಗೆ
Aug 12 2026 7:49PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಹೊರ ರಾಜ್ಯಗಳಿಗೆ ನಿಗದಿ ಮಾಡಿದ ನಂತರ ನಮ್ಮ ರೈತರ ನೆನಪಾಯಿತೇ...?
Aug 11 2026 7:40PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಶಾಸಕರೆ ಸದನದಲ್ಲಿ ಸಮಸ್ಯೆ ಬಗ್ಗೆ ಚರ್ಚಿಸಿ : ಸಿವಿಸಿ
Aug 11 2026 6:22PM | ಜಿಲ್ಲಾ ಸುದ್ದಿಗಳು | ಕೊಪ್ಪಳ ತುಂಗಭದ್ರಾ ಡ್ಯಾಂನಿಂದ ವಿವಿಧ ಕಾಲುವೆಗಳಿಗೆ ನೀರು
Aug 11 2026 5:32PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಚುನಾವಣಾ ತಯಾರಿ ಬಗ್ಗೆ SDPI ಸಂಘಟನಾ ಸಭೆ
Aug 10 2026 8:42PM | ಜಿಲ್ಲಾ ಸುದ್ದಿಗಳು | ಕೊಪ್ಪಳ 7083 ಮೃತರ ಖಾತೆಗೆ ಹಣ
Aug 10 2026 5:27PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳದಲ್ಲಿ ಜೈಲ್ ಭರೋ ಚಳುವಳಿ
Aug 8 2026 5:48PM | ವೈವಿಧ್ಯ | ವಿಷ್ಮಯ ಕವನ : ಪ್ರೀತಿ ಕೊಂದವಳು !
Aug 8 2026 8:25AM | ಜಿಲ್ಲಾ ಸುದ್ದಿಗಳು | ಕೊಪ್ಪಳ 26 ಹುದ್ದೆಗಳಿಗೆ 3 ಸಾವಿರಕ್ಕೂ ಹೆಚ್ಚು ಅರ್ಜಿ




Copyright © 2026 Agni Divya. All Rights Reserved.
Designed & Developed by We Make Digitize