Advt. 
 Views   137

7083 ಮೃತರ ಖಾತೆಗೆ ಹಣ

Aug 10, 2026, 08:42 PM IST
7083 ಮೃತರ ಖಾತೆಗೆ ಹಣ

ಕೊಪ್ಪಳ : ಗೃಹಲಕ್ಷ್ಮಿ ಹಣದ ಜಮಾ ಹಾಗೂ ವಿತರಣೆಯಲ್ಲಿ ಲೋಪ ಆಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವಾಗಲೆ ಕೊಪ್ಪಳ ಜಿಲ್ಲೆಯಲ್ಲೂ ಮೃತ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವ ಪ್ರಕರಣ ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಒಟ್ಟು 3.28 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಪ್ರತಿ ತಿಂಗಳು ಸುಮಾರು ₹63 ಕೋಟಿ ಹಣ ಜಮೆಯಾಗುತ್ತಿದೆ. ಜಿಲ್ಲಾಡಳಿತ ನಡೆಸಿದ ಪರಿಶೀಲನೆಯಲ್ಲಿ 7,083 ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ₹2.74 ಕೋಟಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ಈ ಪೈಕಿ 2,664 ಮೃತ ಫಲಾನುಭವಿಗಳ ಖಾತೆಗಳಿಂದ ಹಣ ಡ್ರಾ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಚೆ ಕಚೇರಿಯಲ್ಲಿ ಇರುವ ಖಾತೆಗಳಲ್ಲಿ ಮೃತ ಫಲಾನುಭವಿಗಳಿಗೆ ಹಣ ಜಮೆ ಆಗಿರುವುದು ಹೆಚ್ಚಿನ ಸಂಖ್ಯೆಯಲ್ಲಿವೆ. ಅಲ್ಲದೆ, ಸುಮಾರು 2,600 ಫಲಾನುಭವಿಗಳು ಡಬಲ್ ಅಕೌಂಟ್ ಹೊಂದಿದ್ದಾರೆ ಎಂಬ ಬಗ್ಗೆ ಪರಿಶೀಲನೆ ಮುಂದುವರಿದಿದೆ.

ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಹೇಮಲತಾ ನಾಯಕ ಆರೋಪಿಸಿದ್ದಾರೆ.

ಈ ಆರೋಪ ನಿರಾಕರಿಸಿರುವ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಸರ್ಕಾರದಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುವುದರಿಂದ ಗೋಲ್ಮಾಲ್ ನಡೆಯಲು ಸಾಧ್ಯವಿಲ್ಲ ಫಲಾನುಭವಿ ಮೃತಪಟ್ಟ ನಂತರವೂ ಹಣ ಜಮೆ ಆಗಿದ್ದು ಕಂಡುಬಂದರೆ ಆ ಹಣ ವಾಪಸ್ ಪಡೆಯಲಾಗುವುದು ಎಂದಿದ್ದಾರೆ.

ಈ ನಡುವೆ, ಪರಿಶೀಲನೆ ವೇಳೆ ಮೃತರ ಖಾತೆಗಳಿಗೆ ಜಮೆಯಾಗಿದ್ದ ಸುಮಾರು ₹81 ಲಕ್ಷವನ್ನು ಸರ್ಕಾರಕ್ಕೆ ಮರಳಿಸಲಾಗಿದೆ ಉಳಿದ ಪ್ರಕರಣಗಳ ಪರಿಶೀಲನೆಯೂ ಮುಂದುವರಿದಿದೆ ಎಂದು ತಿಳಿದು ಬಂದಿದೆ.
 



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Sep 7 2026 9:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಿರಾಣಿ ಅಂಗಡಿಯಲ್ಲಿ ಕಳ್ಳತನ
Sep 6 2026 7:32PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೇತ್ರದಾನ ಮಹತ್ವ ಸಾರಿದ ಜಾಗೃತಿ ಜಾಥಾ
Sep 6 2026 7:04PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಗಲಿದ ರಂಗ ಜಂಗಮರಿಗೆ ನುಡಿ ನಮನ
Sep 6 2026 6:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ
Sep 5 2026 8:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ವಿವಿಧ ಇಲಾಖೆಗಳ ಭ್ರಷ್ಟಾಚಾರ ಬಗ್ಗೆ SIT ತನಿಖೆಯಾಗಲಿ : ಕೊಡ್ಲಿಪೇಟೆ
Sep 4 2026 3:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾಸ್ಪತ್ರೆ ಪಾರ್ಕಿಂಗ್‌ನಿಂದ ಬೈಕ್ ಕಳ್ಳತನ ಕೇಸ್ ನಿಂದ ಪತ್ತೆ
Sep 3 2026 7:51PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಬ್ಬಿಗೆ ₹5500 ಬೆಂಬಲ ಬೆಲೆ ನೀಡಿ : ರೈತರ ಆಗ್ರಹ
Sep 3 2026 6:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮೊದಲು ಕೆರೆ ಒತ್ತುವರಿ ತೆರವು : ಆಮೇಲೆ ಅಭಿವೃದ್ಧಿ
Sep 2 2026 7:23PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪಿಂಚಣಿ ಸ್ಥಗಿತ ಖಂಡಿಸಿ ಪ್ರತಿಭಟನೆ : ಅರ್ಹರಿಗೆ ಅನ್ಯಾಯ ಬೇಡ
Sep 2 2026 6:01PM | ಜಿಲ್ಲಾ ಸುದ್ದಿಗಳು | ಕೊಪ್ಪಳ KPSC ನೇಮಕಾತಿ ಹಗರಣ ಖಂಡಿಸಿ SFI ಪ್ರತಿಭಟನೆ




Copyright © 2026 Agni Divya. All Rights Reserved.
Designed & Developed by We Make Digitize