Advt. 
 Views   151

ತುಂಗಭದ್ರಾ ಡ್ಯಾಂನಿಂದ ವಿವಿಧ ಕಾಲುವೆಗಳಿಗೆ ನೀರು

Aug 11, 2026, 06:22 PM IST
ತುಂಗಭದ್ರಾ ಡ್ಯಾಂನಿಂದ ವಿವಿಧ ಕಾಲುವೆಗಳಿಗೆ ನೀರು

ಕೊಪ್ಪಳ : ಬರಗಾಲ ಛಾಯೆಯಿಂದ ರೈತರ ಆತಂಕದ ನಡುವೆ ಇಂದು ತುಂಗಭದ್ರಾ ಯೋಜನೆಯ 126ನೇ ಸಲಹಾ ಸಮಿತಿ ಸಭೆ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ ಮುನಿರಾಬಾದ್ ನಲ್ಲಿ ಜರುಗಿತು.

ಈ ಸಭೆಯಲ್ಲಿ ಕೊಪ್ಪಳ ಬಳ್ಳಾರಿ ರಾಯಚೂರು ವಿಜಯನಗರ ಜಿಲ್ಲೆ ಶಾಸಕರು ಸಂಸದರು ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಜನಪ್ರತಿನಿಧಿಗಳು, ರೈತ ಮುಖಂಡರು ಭಾಗವಹಿಸಿದ್ದರು.‌

ಈ ಸಭೆಯಲ್ಲಿ ಮುಂಗಾರು ಬೆಳೆಗೆ ಇಂದಿನಿಂದ 90 ದಿನಗಳವರೆಗೆ ವಿವಿಧ ಕಾಲುವೆಗಳಿಗೆ ನೀರು ಬಿಡಲು ತಿರ್ಮಾನವಾಗಿದೆ.

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಇಂದಿನಿಂದ 90 ದಿನಗಳ ಕಾಲ ಅಂದ್ರೆ ನವೆಂಬರ್ 10 ವರೆಗೆ 4100 ಕ್ಯೂಸೆಕ್ಸ್ ನೀರು ಬಿಡಲಾಗುತ್ತದೆ.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ 90 ದಿನಗಳವರೆಗೆ 1200 ಕ್ಯೂಸೆಕ್ಸ್ ನೀರು.

ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ 90 ದಿನಗಳವರೆಗೆ 650 ಕ್ಯೂಸೆಕ್ಸ್ ನೀರು.

ರಾಯ ಬಸವಣ್ಣ ಕಾಲುವೆಗೆ ಡಿಸೆಂಬರ್ 10 ವರೆಗೆ 180 ಕ್ಯೂಸೆಕ್ಸ್ ನೀರು.

ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ಸ್ ನೀರು.‌

ಇಂದಿನಿಂದ ಅಗಸ್ಟ್ 17 ವರೆಗೆ ತುಂಗಭದ್ರಾ ನದಿಗೆ 500 ಕ್ಯೂಸೆಕ್ಸ್ ನೀರು ಬಿಡುವ ತಿರ್ಮಾನ ಆಗಿದೆ.

ಮುಂದಿನ ನೀರಾವರಿ ಸಲಹಾ ಸಮಿತಿ ಸಭೆ ಸೆಪ್ಟೆಂಬರ್ 10 ರಂದು ಜರುಗಲಿದೆ ಎಂದು ತಿಳಿದು ಬಂದಿದೆ.



Share this news

 Comments   0

Post your Comment

PEOPLE'S OPINION

Be the first person to comment this.


LATEST ARTICLES


Sep 7 2026 9:03AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಕಿರಾಣಿ ಅಂಗಡಿಯಲ್ಲಿ ಕಳ್ಳತನ
Sep 6 2026 7:32PM | ಜಿಲ್ಲಾ ಸುದ್ದಿಗಳು | ಕೊಪ್ಪಳ ನೇತ್ರದಾನ ಮಹತ್ವ ಸಾರಿದ ಜಾಗೃತಿ ಜಾಥಾ
Sep 6 2026 7:04PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಅಗಲಿದ ರಂಗ ಜಂಗಮರಿಗೆ ನುಡಿ ನಮನ
Sep 6 2026 6:58PM | ಜಿಲ್ಲಾ ಸುದ್ದಿಗಳು | ಕೊಪ್ಪಳ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ
Sep 5 2026 8:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ವಿವಿಧ ಇಲಾಖೆಗಳ ಭ್ರಷ್ಟಾಚಾರ ಬಗ್ಗೆ SIT ತನಿಖೆಯಾಗಲಿ : ಕೊಡ್ಲಿಪೇಟೆ
Sep 4 2026 3:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಜಿಲ್ಲಾಸ್ಪತ್ರೆ ಪಾರ್ಕಿಂಗ್‌ನಿಂದ ಬೈಕ್ ಕಳ್ಳತನ ಕೇಸ್ ನಿಂದ ಪತ್ತೆ
Sep 3 2026 7:51PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಬ್ಬಿಗೆ ₹5500 ಬೆಂಬಲ ಬೆಲೆ ನೀಡಿ : ರೈತರ ಆಗ್ರಹ
Sep 3 2026 6:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಮೊದಲು ಕೆರೆ ಒತ್ತುವರಿ ತೆರವು : ಆಮೇಲೆ ಅಭಿವೃದ್ಧಿ
Sep 2 2026 7:23PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಪಿಂಚಣಿ ಸ್ಥಗಿತ ಖಂಡಿಸಿ ಪ್ರತಿಭಟನೆ : ಅರ್ಹರಿಗೆ ಅನ್ಯಾಯ ಬೇಡ
Sep 2 2026 6:01PM | ಜಿಲ್ಲಾ ಸುದ್ದಿಗಳು | ಕೊಪ್ಪಳ KPSC ನೇಮಕಾತಿ ಹಗರಣ ಖಂಡಿಸಿ SFI ಪ್ರತಿಭಟನೆ




Copyright © 2026 Agni Divya. All Rights Reserved.
Designed & Developed by We Make Digitize